ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಾಣಿಜ್ಯ ತೆರಿಗೆ ಸಂಗ್ರಹದ ಬೆಳವಣಿಗೆ ದರ ಶೇ.19.2ರಷ್ಟಿದ್ದು, ಈ ಬೆಳವಣಿಗೆ ದರ ಇಡೀ ದೇಶದಲ್ಲಿಯೇ ಅತಿ ಹೆಚ್ಚು. ಆ ಮೂಲಕ, ಸರಕು ಮತ್ತು ಸೇವಾ ತೆರಿಗೆ ಮತ್ತು ಮಾರಾಟ ತೆರಿಗೆ ಸಂಗ್ರಹದ ಸಾಧನೆಯಲ್ಲಿ ಕರ್ನಾಟಕವು ದೇಶಕ್ಕೆ ನಂಬರ್ ಒನ್ ಎನಿಸಿಕೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಗುರುವಾರ ನಡೆಸಿದ ಮುಖ್ಯಮಂತ್ರಿ, ರಾಜ್ಯದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಒಟ್ಟಾರೆ ತೆರಿಗೆ