ನವದೆಹಲಿ : ಈಗಾಗಲೇ ಬ್ಯಾಂಕುಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್ 21 ಹಾಗೂ 26ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿತ್ತು. ಆದರೆ ಇದೀಗ ಮತ್ತೆ ಜನವರಿಯಲ್ಲಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರವನ್ನು ಹಮ್ಮಿಕೊಂಡಿದೆ. ಕೆಲವು ಬಾಕಿ ಉಳಿದಿರುವ ಸಮಸ್ಯೆಗಳನ್ನು ಪ್ರತಿಭಟಿಸಿ 2019 ರ ಜನವರಿ 8 ಮತ್ತು 9 ರಂದು ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್(ಎಐಬಿಇಎ) ಬ್ಯಾಂಕ್ ಮುಷ್ಕರವನ್ನು ಹಮ್ಮಿಕೊಂಡಿದೆ ಎಂದು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.