ನವದೆಹಲಿ : ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡುತ್ತಿರುವ ಕಾರಣ ಅವುಗಳ ಮೇಲೆ ನಿಷೇಧ ಹೇರಲಾಗುವುದು ಎಂಬ ಮಾತು ಕೇಳಿಬಂದಿತ್ತು. ಆದರೆ ಈ ಕುರಿತು ಮಾತನಾಡಿದ ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣ ಸುಂದರರಾಜನ್, ಸಾಮಾಜಿಕ ಜಾಲತಾಣಗಳು ಹಾಗೂ ಮೆಸೇಜಿಂಗ್ ಆ್ಯಪ್ಗಳ ಮೇಲೆ ನಿಷೇಧ ಹೇರುವ ಪ್ರಸ್ತಾಪ ಸರಕಾರಕ್ಕಿಲ್ಲ. ಆದರೆ ಇವುಗಳ ದುರ್ಬಳಕೆಯನ್ನು ತಡೆಗಟ್ಟಲು ಕೆಲವು ತಾಂತ್ರಿಕ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ವದಂತಿಗಳನ್ನು ಹರಡುವುದು, ಅವಹೇಳನಕರ ಹಾಗೂ