ರಾಜ್ಯದ 7 ಜಿಲ್ಲೆಗಳ ಬಯಲು ಸೀಮೆ ಪ್ರದೇಶಗಳಿಗೆ ನೀರು ಪೂರೈಸುವ ಉದ್ದೇಶದೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಎತ್ತಿನಹೊಳೆ ಯೋಜನೆಗೆ ಅಗತ್ಯವಿರುವ ಸುಮಾರು 600 ಎಕರೆ ಭೂಮಿಯನ್ನು ಖರೀದಿಸಲು ದರ ನಿರ್ಧರಣೆಗೆ ಅಗತ್ಯವಿರುವ ಪೂರ್ವ ತಯಾರಿಗಾಗಿ ಜಿಲ್ಲಾಧಿಕಾರಿ ವಿ. ಚೈತ್ರ ಅವರ ಅಧ್ಯಕ್ಷತೆಯಲ್ಲಿಂದು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು ಈವರೆಗೆ ಆಗಿರುವ ಪ್ರಗತಿಯ ಬಗ್ಗೆ ಭೂಸ್ವಾಧೀನ ಅಧಿಕಾರಿ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.