ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮೊಮ್ಮಗಳು, ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ಮಗಳು ಆರಾಧ್ಯ ಬಚ್ಚನ್ ಸುಳ್ಳು ಸುದ್ದಿ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾಳೆ.ಐಶ್ವರ್ಯಾ-ಅಭಿ ದಂಪತಿಯ 11 ವರ್ಷದ ಮಗಳು ಯೂ ಟ್ಯೂಬ್ ಚಾನೆಲ್ ಒಂದು ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ್ದಕ್ಕೆ ದೆಹಲಿ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾಳೆ.ತಾನು ಅಪ್ರಾಪ್ತೆ ಎಂಬ ಕಾರಣಕ್ಕೆ ಆರೋಗ್ಯದ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹರಡಿಸುತ್ತಿರುವುದು ತನ್ನ ಹಾಗೂ