'ಆಚಾರ್ಯ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆಯಾಗುತ್ತಾ?

ಹೈದರಾಬಾದ್| pavithra| Last Updated: ಮಂಗಳವಾರ, 6 ಏಪ್ರಿಲ್ 2021 (11:54 IST)
ಹೈದರಾಬಾದ್ : ಬಹು ಬಜೆಟ್ ನಲ್ಲಿ ನಿರ್ಮಿಸಲಾಗುತ್ತಿರುವ ಮೆಗಾಸ್ಟಾರ್ ಚಿರಂಜೀವಿ ಹಾಗೂ ಸ್ಟಾರ್ ನಟ ರಾಮ್ ಚರಣ್ ಅವರು ಜೊತೆಯಾಗಿ ನಟಿಸಿದ ‘ಆಚಾರ್ಯ’ ಚಿತ್ರದ ಬಿಡುಗಡೆಯ ದಿನವನ್ನು ಮುಂದೂಡಲು ಚಿತ್ರತಂಡ ಯೊಜಿಸುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ.

ಆಚಾರ್ಯ ಚಿತ್ರವನ್ನು ಮೇ 13ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ‍ಘೋಷಿಸಿದೆ. ಹಾಗಾಗಿ ಚಿತ್ರದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿದೆ. ಆದರೆ ಈ ನಡುವೆ ತೆಲುಗು ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ತೀವ್ರವಾದ ಹಿನ್ನಲೆಯಲ್ಲಿ ಆಚಾರ್ಯ ನಿರ್ಮಾಪಕರು ಚಿತ್ರ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ಅಲ್ಲದೇ ಕರ್ನಾಟಕದಲ್ಲಿಯೂ ಕೂಡ ಕೊರೊನಾ ಹಾವಳಿ ಹೆಚ್ಚಾಗಿದ್ದು, ಲಾಕ್ ಡೌನ್ ಬಗ್ಗೆ ಚರ್ಚೆ ನಡೆಯುತ್ತಿದೆ. ಈಗಾಗಲೇ ಚಿತ್ರಮಂದಿರದಲ್ಲಿ 50% ಸೀಟುಗಳಿಗೆ ಅವಕಾಶ ನೀಡಲಾಗಿದೆ. ಹಾಗಾಗಿ ಬಹುಬಜೆಟ್ ನಲ್ಲಿ ನಿರ್ಮಿಸಲಾದ ಆಚಾರ್ಯ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :