ಬೆಂಗಳೂರು: ಮೊನ್ನೆಯಷ್ಟೇ ನಟ ಅನಿರುದ್ಧ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಕಿದ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದಲ್ಲದೆ, ಕಸ ನಿರ್ವಹಣೆ ಮಾಡುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರು.ಆ ಮನವಿಗೆ ಈಗ ಬಿಬಿಎಂಪಿ ಅಧಿಕಾರಿಗಳು ಇದೀಗ ಸ್ಪಂದಿಸಿದ್ದಾರೆ. ತಮ್ಮ ಒಂದೇ ಒಂದು ಮನವಿಗೆ ಸ್ಪಂದಿಸಿದ ಅಧಿಕಾರಿಗಳನ್ನು ಅನಿರುದ್ಧ್ ಈಗ ಸನ್ಮಾನಿಸಲು ಹೊರಟಿದ್ದಾರೆ. ತಕ್ಷಣವೇ ಸ್ಪಂದಿಸಿ ಕುಮಾರಸ್ವಾಮಿ ಲೇಔಟ್ ನಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದ ಭಾರೀ ಪ್ರಮಾಣ ಕಸ