ಚೆನ್ನೈ: ತಮಿಳಿನ ಖ್ಯಾತ ನಟ, ರಾಜಕಾರಣಿ ವಿಜಯ್ ಕಾಂತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತೀವ್ರ ಜ್ವರದಿಂದ ಬಳಲುತ್ತಿರುವ ಕ್ಯಾಪ್ಟನ್ ವಿಜಯ್ ಕಾಂತ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ದಿನಗಳಿಂದ ಅವರಿಗೆ ಅನಾರೋಗ್ಯ ಕಾಡಿದೆ ಎನ್ನಲಾಗಿದೆ.71 ವರ್ಷದ ವಿಜಯ್ ಕಾಂತ್ ಗೆ ವಯೋಸಹಜವಾದ ಖಾಯಿಲೆಗಳೂ ಇವೆ. ಹೀಗಾಗಿ ಅವರು ತೀವ್ರ ಸುಸ್ತಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ವಿಶ್ವಾಸವಿದೆ.