ಮೈಸೂರು : ಕಾರು ಅಪಘಾತಕ್ಕೀಡಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಟ ದರ್ಶನ್ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೇ ಎದುರಿಗಿದ್ದ ಮಾಧ್ಯಮದವರ ಮೇಲೆ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ನಟ ದರ್ಶನ್, ಆಸ್ಪತ್ರೆಯಲ್ಲಿ ಇದ್ದಕೊಂಡು ನಾನು ಎಲ್ಲ ನ್ಯೂಸ್ ಚಾನೆಲ್ಗಳನ್ನು ನೋಡಿದ್ದೇನೆ. ಊಹಾಪೋಹಗಳ ಮೇಲೆ ನೀವೇ ಎಲ್ಲವನ್ನೂ ನಿರ್ಧಾರ ಮಾಡಿಬಿಟ್ಟರೆ ಹೇಗೆ? ಕಾರಿನಲ್ಲಿ ಯುವತಿಯೊಬ್ಬರು ಇದ್ದರು ಅಂತ ವರದಿ ಮಾಡಿದ್ದೀರಿ. ಒಬ್ಬರಲ್ಲ ನಾಲ್ವರು ನನ್ನ ತೊಡೆಯ