ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಮಂಡ್ಯದಿಂದ ಬ್ರೇಕ್ ತೆಗೆದುಕೊಂಡು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.ಇಂದು ಬೆಂಗಳೂರು ಸೆಂಟ್ರಲ್ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಪರ ದರ್ಶನ್ ಪ್ರಚಾರ ನಡೆಸಲಿದ್ದಾರೆ. ವಿಶೇಷವೆಂದರೆ ಇಲ್ಲಿ ನಟ ಪ್ರಕಾಶ್ ರೈ ಸ್ವತಂತ್ರರಾಗಿ ಸ್ಪರ್ಧಿಸುತ್ತಿದ್ದಾರೆ.ಈ ಮೊದಲೇ ದರ್ಶನ್ ನನ್ನ ಆತ್ಮೀಯರು, ಉತ್ತಮ ಅಭ್ಯರ್ಥಿಗಳು ಯಾವುದೇ ಪಕ್ಷದವರಾಗಿರಲಿ, ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದಿದ್ದರು.