ಶಬರಿಮಲೆ ದೇವಾಲಯ ಪ್ರವೇಶಿಸಿದ ಅನ್ಯಧರ್ಮಿಯ ನಟಿ ರೆಹನಾ ಫಾತಿಮಾ ಮೇಲೆ ಕಿಡಿಕಾರಿದ ನಟ ಜಗ್ಗೇಶ್

ಬೆಂಗಳೂರು| pavithra| Last Updated: ಶನಿವಾರ, 20 ಅಕ್ಟೋಬರ್ 2018 (07:18 IST)
ಬೆಂಗಳೂರು : ಮಾಲೆ ಧರಿಸಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿದ 'ಕಿಸ್​ ಆಫ್​ ಲವ್'​​ ಚಿತ್ರದ ನಟಿ ರೆಹನಾ ಫಾತಿಮಾ ವಿರುದ್ಧ
ನಟ ನವರಸ ನಾಯಕ ಜಗ್ಗೇಶ್ ಅವರು ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.


ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ಇದೀಗ ಬಾರೀ ವಿರೋಧ ವ್ಯಕ್ತವಾಗುತ್ತಿದ್ದು ಈ ಮಧ್ಯ ನಟಿ ರೆಹನಾ ಫಾತಿಮಾ ಪೊಲೀಸರ ಭದ್ರತೆಯೊಂದಿಗೆ ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿದ್ದಾಳೆ. ಮಾಲೆ ಧರಿಸಿ ದರ್ಶನ ಪಡೆದ ನಂತರ ನಟಿ ರೆಹನಾ ತನ್ನ ಫೋಟೊ ತೆಗೆದು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ನಟ ನವರಸನಾಯಕ ಜಗ್ಗೇಶ್ ತಮ್ಮ ಟ್ವಿಟ್ಟರ್​ ಖಾತೆಯಲ್ಲಿ “ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್..ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ!ವಿನಾಶಕಾಲಕ್ಕೆ ವಿಪರೀತ ಬುದ್ಧಿ!ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳಸರ್ಕಾರ!ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂಧುದರ್ಮ ಇಂಥವರಿಗಾ?ಜೈಹಿಂದ್” ಎಂದು ನಟಿಯ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :