ಬೆಂಗಳೂರು: ಸಾಮಾನ್ಯವಾಗಿ ನಮ್ಮ ಸುತ್ತಲು ನಡೆಯುವ ಯಾವುದೇ ವಿಚಾರಗಳ ಬಗ್ಗೆ ನವರಸನಾಯಕ ಜಗ್ಗೇಶ್ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಆದರೆ ಈ ಬಾರಿ ಅವರು ಲೈವ್ ಬಂದು ಸಿಎಂ ಕುಮಾರಸ್ವಾಮಿಗೆ ವಿಶೇಷ ಮನವಿ ಮಾಡಿದ್ದಾರೆ.ಮಧ್ಯಾಹ್ನ ತಮ್ಮ ಸಾಮಾಜಿಕ ಜಾಲತಾಣದ ಪೇಜ್ ನಲ್ಲಿ ಲೈವ್ ಬಂದಿರುವ ಜಗ್ಗೇಶ್ ಹಿಂದೂಗಳ ಆರಾಧ್ಯ ದೈವ ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ. ಭಗವಾನ್ ಮಾತಿಗೆ ಕಡಿವಾಣ ಹಾಕಿ ಎಂದು ಸಿಎಂ ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.ಒಬ್ಬ