ಬೆಂಗಳೂರು: ಸರ್ಜಿಕಲ್ ಸ್ಟ್ರೈಕ್ ವಿಚಾರವಾಗಿ ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ ನಟಿ, ಕಾಂಗ್ರೆಸ್ ನಾಯಕಿ ರಮ್ಯಾಗೆ ನಟ ಜಗ್ಗೇಶ್ ಟಾಂಗ್ ಕೊಟ್ಟಿದ್ದಾರೆ.ಇನ್ನೊಂದೆಡೆ ಸರ್ಜಿಕಲ್ ಸ್ಟ್ರೈಕ್ ನಿಂದ ಬಿಜೆಪಿ ಕರ್ನಾಟಕದಲ್ಲಿ 22 ಸ್ಥಾನ ಗೆಲ್ಲುವುದು ಗ್ಯಾರಂಟಿ ಎಂಬರ್ಥದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಜಗ್ಗೇಶ್ ಸಮರ್ಥಿಸಿದ್ದಾರೆ.ಮೊದಲು ರಮ್ಯಾಗೆ ಪರೋಕ್ಷವಾಗಿ ಟಾಂಗ್ ನೀಡಿದ ಜಗ್ಗೇಶ್ ದೇಶ ಮೆಚ್ಚುವ ನರೇಂದ್ರ ಮೋದಿ ನಿರ್ಣಯಕ್ಕೆ ಕಂಗಾಲಾಗಿದ್ದು, ಸಮಯ ಸಾಧಕರು.