ನಟ ನಂದಮೂರಿ ಬಾಲಕೃಷ್ಣಗೆ ಶಸ್ತ್ರಚಿಕಿತ್ಸೆ

ಹೈದರಾಬಾದ್| Krishnaveni K| Last Modified ಬುಧವಾರ, 3 ನವೆಂಬರ್ 2021 (10:37 IST)
ಹೈದರಾಬಾದ್: ತೆಲುಗಿನ ಖ್ಯಾತ ನಟ ಹೈದರಾಬಾದ್ ನಲ್ಲಿ ಭುಜದ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.

ಹೈದರಾಬಾದ್ ನ ಕೆಆರ್ ಆಸ್ಪತ್ರೆಯಲ್ಲಿ ನಟನಿಗೆ ಶಸ್ತ್ರಚಿಕಿತ್ಸೆ ನಡೆದಿದೆ. ಕಳೆದ ಕೆಲವಾರು ತಿಂಗಳಿನಿಂದ ಬಾಲಯ್ಯ ಭುಜದ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ.


ಸತತ ನಾಲ್ಕು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆದಿದ್ದು, ಇದೀಗ
ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಮೊನ್ನೆಯಷ್ಟೇ ನಟ ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನಕ್ಕೆ ಅವರು ಬೆಂಗಳೂರಿಗೆ ಬಂದಿದ್ದರು.


ಇದರಲ್ಲಿ ಇನ್ನಷ್ಟು ಓದಿ :