ಕೊಚ್ಚಿ: ಮಲಯಾಳಂ ಚಿತ್ರರಂಗದ ದಿಗ್ಗಜ ಹಿರಿಯ ನಟ, ರಾಷ್ಟ್ರಪ್ರಶಸ್ತಿ ವಿಜೇತ ನೆಡುಮುಡಿ ವೇಣು ಇಂದು ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದ ಅವರು ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಅನಾರೋಗ್ಯದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಅವರು ಮೂರು ಬಾರಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಮಲಯಾಳಂ, ತಮಿಳು ಅಲ್ಲದೆ ಒಂದು ಇಂಗ್ಲಿಷ್ ಭಾಷೆಯ ಸಿನಿಮಾದಲ್ಲೂ ನಟಿಸಿದ ಖ್ಯಾತಿ ಅವರದ್ದಾಗಿದೆ. ಕಮಲ್