ಇಂದು ಬೆಳಗಿನ ಜಾವ ನಿಧನರಾದ ಹಿರಿಯ ನಟ ರಾಜೇಶ್ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡುವುದಾಗಿ ನಟ, ರಾಜೇಶ್ ಅವರ ಅಳಿಯ ಅರ್ಜುನ್ ಸರ್ಜಾ ತಿಳಿಸಿದ್ದಾರೆ.ಕೋವಿಡ್ ಆತಂಕದ ನಡುವೆಯೂ ಸರಕಾರದ ನಿಯಮ ಪಾಲಿಸಿಕೊಂಡು ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತು ಮಾತನಾಡಿರುವ ಅರ್ಜುನ್ ಸರ್ಜಾ, ಕಳೆದ ಹತ್ತು ದಿನಗಳಿಂದ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿತ್ತು.ಮೊದಲು ಕೋವಿಡ್ ನಂತರ ಸಿಕೆಡಿ ಸಮಸ್ಯೆಯಿಂದ ಅವರು