ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು (ಫೆ.25) ಶಿವಮೊಗ್ಗದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ವಿಚಾರಣೆ ಎದುರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಮಾರ್ಚ್ 1ಕ್ಕೆ ಪ್ರಕರಣವನ್ನು ಮುಂದೂಡಿದ್ದಾರೆ. ಶಿವರಾಜ್ ಕುಮಾರ್ ಜತೆಗೆ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಸಹ ಹಾಜರಾಗಿದ್ದರು.