ಕೊಚ್ಚಿ: ಯುವತಿಯೊಬ್ಬಳಿಗೆ ಅವಕಾಶ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದ ಮಲಯಾಳಂ ನಟ ವಿಜಯ್ ಬಾಬು ಬಂಧನವಾಗಿದೆ. ಇಂದಿನಿಂದ ಜುಲೈ 3 ರವರೆಗೆ ಅಂದರೆ ಒಂದು ವಾರ ಕಾಲ ವಿಜಯ್ ಬಾಬು ಅವರನ್ನು ವಿಚಾರಣೆಗೊಳಪಡಿಸಲು ಪೊಲೀಸರಿಗೆ ಅನುಮತಿ ನೀಡಲಾಗಿದೆ.ಈ ಮೊದಲು ಜೂನ್ 22 ರಂದು ವಿಜಯ್ ಬಾಬುಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಪ್ರಕರಣದ ಹೆಚ್ಚಿನ ವಿಚಾರಣೆಗೆ ಅವರನ್ನು ವಶಕ್ಕೆ ಪಡೆಯಲಾಗಿದೆ.