ಬೆಂಗಳೂರು : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ತನ್ನ ಎರಡೂ ಕೈಗಳನ್ನ ಕಳೆದುಕೊಂಡು ಕಷ್ಟದಲ್ಲಿರುವ ತಮ್ಮ ಅಭಿಮಾನಿಯೊಬ್ಬರಿಗೆ ಸಹಾಯಹಸ್ತ ನೀಡಿದ್ದಾರೆ. ಹಾವೇರಿ ಮೂಲದ ಅಗಡಿ ಗ್ರಾಮದ 24 ವರ್ಷದ ಯುವಕ ಹರೀಶ್ ಅವರು ಯಶ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ತಳ್ಳುವ ಗಾಡಿಯಲ್ಲಿ ಊಟ ತಿಂಡಿ ಮಾರಿಕೊಂಡು ಜೀವನ ಸಾಗಿಸುತ್ತಿದ್ದ. ತನ್ನ ಜೊತೆಗೆ ತನ್ನ ಇಡೀ ಕುಟುಂಬಕ್ಕೆ ಆಸರೆಯಾಗಿದ್ದ ಈ ಹರೀಶ್ ಮಾರ್ಚ್ನಲ್ಲಿ ನಡೆದ ಊರ ಜಾತ್ರೆಯಲ್ಲಿ