Photo Courtesy: Twitterಬೆಂಗಳೂರು: ಬ್ರೈನ್ ಹೆಮರೆಜ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎನ್ನಲಾಗಿದೆ.ಸೌತ್ ಎಂಡ್ ಸರ್ಕಲ್ ನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಹೇಮಾ ಚೌಧರಿಯನ್ನು ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಅವರ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆಗೂ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ಆತಂಕದ ವಾತಾವರಣವಿತ್ತು.ಆದರೆ ಈಗ ಹೇಮಾ ಚೌಧರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎಂದು