ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಅಭಿನಯ ಶಾರದೆ ಎಂದೇ ಖ್ಯಾತಿ ಹೊಂದಿರುವ ಜಯಂತಿ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಕಾರಣ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದು, ಸೋಮವಾರ ಬೆಳ್ಳಿಗ್ಗೆ ಅವರಿಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಅವರ ಪುತ್ರ ಕೃಷ್ಣಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕೃಷ್ಣಕುಮಾರ್