ಬೆಂಗಳೂರು : ಸ್ಯಾಂಡಲ್ವುಡ್ ಅಭಿನಯ ಶಾರದೆ ಜಯಂತಿ ಅವರು ಉಸಿರಾಟದ ತೊಂದರೆಯಿಂದ ಅಸ್ವಸ್ಥರಾಗಿದ್ದ ಕಾರಣ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಾರ್ಚ್ 26 ಸೋಮವಾರ ಅವರು ಅಸ್ವಸ್ಥರಾಗಿದ್ದು, ಸುಮಾರು ಬೆಳಗ್ಗೆ 11 ಗಂಟೆಗೆ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದರೂ ಕೂಡ ಅವರ ಬಗ್ಗೆ ಇಲ್ಲಸಲ್ಲದ ರೂಮರ್ಸ್ ಗಳು ಕೇಳಿಬಂದಿದ್ದವು. ಆದರೆ ಇದೀಗ ಅವರು ಚೇರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.