ತಿರುವನಂತಪುರಂ: ಕೇರಳದಲ್ಲಿ ಕಳೆದ ವರ್ಷ ಬಹುಭಾಷಾ ನಟಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣ ಭಾರೀ ಸುದ್ದಿ ಮಾಡಿತ್ತು. ಇದೀಗ ಮತ್ತೊಬ್ಬ ನಟಿ ಮೇಲೆ ರೈಲಿನಲ್ಲಿ ಲೈಂಗಿಕ ಕಿರುಕುಳ ನಡೆದ ಪ್ರಕರಣ ವರದಿಯಾಗಿದೆ. ಕಣ್ಣುರಿನಿಂದ ತಿರುವನಂತಪುರಂಗೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸುತ್ತಿದ್ದ ಬಹುಭಾಷಾ ತಾರೆ ಸನುಶಾ ಸಂತೋಷ್ (23) ಮೇಲೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ.ಮಲಗಿದ್ದ ನಟಿಯ