ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಜೊತೆ ಶಿವಲಿಂಗ ಸೇರಿದಂತೆ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿರುವ ನಟಿ ವೇದಿಕಾಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸ್ವತಃ ವೇದಿಕಾ ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ರೀತಿಯ ಜ್ವರದಿಂದ ಬಳಲುತ್ತಿರುವ ಅವರು, ಅಗತ್ಯ ಚಿಕಿತ್ಸೆಯನ್ನೂ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿರುವ ಅವರು, ಇದೇ ಮೊದಲ ಬಾರಿಗೆ ನನಗೆ ಕೋವಿಡ್ ಪಾಸಿಟಿವ್ ಆಗಿದೆ. ನನ್ನ ದುರಾದೃಷ್ಟ ಎಂದು ನೋವು ಹಂಚಿಕೊಂಡಿದ್ದಾರೆ.