ಬೆಂಗಳೂರು: ಮೊನ್ನೆಯಷ್ಟೇ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಇಂದು ತೆಲುಗು ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಭೇಟಿ ನೀಡಿದ್ದಾರೆ.ಪುನೀತ್ ನಿವಾಸಕ್ಕೆ ಭೇಟಿ ನೀಡಿದ ನಾಗಾರ್ಜುನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಿವರಾಜ್ ಕುಮಾರ್ ಅವರನ್ನು ಬರಮಾಡಿಕೊಂಡರು.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗಾರ್ಜುನ ‘ಇಷ್ಟು ಒಳ್ಳೆಯ ವ್ಯಕ್ತಿಯನ್ನು ಯಾಕೆ ದೇವರು ಇಷ್ಟು ಬೇಗ ಕರೆಸಿಕೊಂಡ ಎನ್ನುವುದೇ ಗೊತ್ತಾಗುತ್ತಿಲ್ಲ. ಪುನೀತ್ ಯಾವಾಗ ಸಿಕ್ಕರೂ ಒಳ್ಳೆಯ ಮಾತನಾಡುತ್ತಿದ್ದರು.