ಬೆಂಗಳೂರು: ನಟ-ಮಾಜಿ ಸಚಿವ ಅಂಬರೀಶ್ ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಅನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಭಾನುವಾರ ಇಡೀ ದಿನ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ