ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಇತ್ತೀಚೆಗೆ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಅವರು ಮುಂದೊಂದು ದಿನ ರಾಜಕೀಯಕ್ಕೆ ಬರುವ ಉದ್ದೇಶವಿಟ್ಟುಕೊಂಡಿದ್ದಾರಾ? ಬಿಬಿಎಂಪಿ ಕಮಿಷನರ್ ಭೇಟಿಯಾದ ನಟ ಅನಿರುದ್ಧ್ ಸ್ವಚ್ಛತೆ ಮತ್ತು ಕೆರೆಗಳ ಅಭಿವೃದ್ಧಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪತ್ರಕರ್ತರು ಈಗ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ನಿಮಗೆ ಮುಂದೊಂದು ದಿನ ರಾಜಕೀಯಕ್ಕೆ ಬರುವ ಇಚ್ಛೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಅವರು ‘ಒಳ್ಳೆ ಕೆಲಸ