ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಿದ್ದ ನಂತರ ನಟ ಅನಿರುದ್ಧ್ ಜತ್ಕಾರ್ ಗೆ ಸಾಕಷ್ಟು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಬೆಂಬಲ ಸೂಚಿಸುತ್ತಿದ್ದಾರೆ. ಜೊತೆಗೆ ಅಭಿಮಾನಿಗಳ ಗುಂಪೊಂದು ಪ್ರಸ್ ಮೀಟ್ ಮಾಡಿ ನಟನ ಪರವಾಗಿ ಮಾತನಾಡಿದೆ.ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಅನಿರುದ್ಧ್ ತಮ್ಮನ್ನು ಬೆಂಬಲಿಸುವ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ. ನಿಮ್ಮೆಲ್ಲರ ಪ್ರೀತಿಗೆ ನಾನು ಸದಾ ಚಿರಋಣಿ ಎಂದಿದ್ದಾರೆ.ಈ ನಡುವೆ ಧಾರವಾಹಿಯ ಬಿಕ್ಕಟ್ಟು ಸುಖಾಂತ್ಯವಾಗುವ ಲಕ್ಷಣವಂತೂ ಕಾಣುತ್ತಿಲ್ಲ.