ಬೆಂಗಳೂರು: ಕೊರೋನಾ ಸಂಕಷ್ಟದ ಸಮಯದಲ್ಲಿ ಸ್ಯಾಂಡಲ್ ವುಡ್ ಕಲಾವಿದರೂ ತಮ್ಮ ಅಭಿಮಾನಿಗಳಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಆದರೆ ನಟ ಅರ್ಜುನ್ ಗೌಡ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.ಕೊರೋನಾ ರೋಗಿಗಳು, ಮೃತದೇಹಗಳನ್ನು ಸಾಗಿಸುವ ಆಂಬ್ಯುಲೆನ್ಸ್ ಚಾಲಕರಾಗಿ ಅರ್ಜುನ್ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡಾ ಅರ್ಜುನ್ ಗೌಡವನ್ನು ವಿಶೇಷವಾಗಿ ಉಲ್ಲೇಖಿಸಿ ಅಭಿನಂದಿಸಿದ್ದಾರೆ.ಕಳೆದ ಬಾರಿ ಲಾಕ್ ಡೌನ್