ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಆಸ್ಪತ್ರೆಗೆ ದಾಖಲು

ಬೆಂಗಳೂರು| Krishnaveni K| Last Modified ಶುಕ್ರವಾರ, 9 ಏಪ್ರಿಲ್ 2021 (10:59 IST)
ಬೆಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿರುವ ಸಂಗೀತ ಸಂಯೋಜಕ ಅರ್ಜುನ್ ಜನ್ಯಾ ಈಗ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
 > ಮೊನ್ನೆಯಷ್ಟೇ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ ಅವರು ಹೋಂ ಕ್ವಾರಂಟೈನ್ ನಲ್ಲಿದ್ದರು. ಆದರೆ ಇದೀಗ ವೈದ್ಯರ ಸಲಹೆ ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.>   ಕಳೆದ ವರ್ಷ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಯಾವುದೇ ಅಪಾಯವಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ತೀರ್ಮಾನಿಸಿದ್ದಾರೆ. ಇದೀಗ ಅವರು ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ ಎಂದು ತಿಳಿದುಬಂದಿದೆ.



ಇದರಲ್ಲಿ ಇನ್ನಷ್ಟು ಓದಿ :