ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ತಮ್ಮ ವಿರುದ್ಧ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.ಇತ್ತೀಚೆಗೆ ಕೊರೋನಾ ಸೋಂಕಿತರಾಗಿ ಆಸ್ಪತ್ರೆ ಸೇರಿದ್ದ ಅರ್ಜುನ್ ಜನ್ಯಾ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಅವರ ಆರೋಗ್ಯ ಗಂಭೀರವಾಗಿದೆ. ಅವರ ಪತ್ನಿ ಕಣ್ಣೀರಿಡುತ್ತಿದ್ದಾರೆ ಎಂದು ಕೆಲವು ಯೂ ಟ್ಯೂಬ್ ಚಾನೆಲ್ ಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ.ಇದು ಜನ್ಯಾ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರಕಟಣೆ ಹೊರಹಾಕಿರುವ ಜನ್ಯಾ