ಬೆಂಗಳೂರು: ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಕೆಜಿಎಫ್ 2 ಸಿನಿಮಾದ ಟ್ರೈಲರ್ ಭರ್ಜರಿ ಸೌಂಡ್ ಮಾಡುತ್ತಿದೆ.ಈ ಟ್ರೈಲರ್ ನೋಡಿದ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡಾ ಕೆಜಿಎಫ್ 2 ಟ್ರೈಲರ್ ಮೆಚ್ಚಿದ್ದಾರೆ.ಕೆಜಿಎಫ್ 2 ಟ್ರೈಲರ್ ಬಿಡುಗಡೆ ದಿನ ನಿರ್ದೇಶಕ ಪ್ರಶಾಂತ್ ನೀಲ್ ಈ ಸಿನಿಮಾ ಪುನೀತ್ ಗೆ ಅರ್ಪಣೆ ಎಂದಿದ್ದರು. ಇದೀಗ ಟ್ರೈಲರ್ ವೀಕ್ಷಿಸಿದ ಅಶ್ವಿನಿ ಪುನೀತ್ ‘ಕೆಜಿಎಫ್ 2 ಟ್ರೈಲರ್ ಅದ್ಭುತವಾಗಿದೆ.