ಬೆಂಗಳೂರು: ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದು ಧನ್ಯವಾದ ಸಲ್ಲಿಸಿದ್ದಾರೆ.ಪುನೀತ್ ಅಗಲಿದ ಬಳಿಕ ಅಭಿಮಾನಿಗಳು ಭಾವೋದ್ವೇಗಕ್ಕೊಳಗಾಗಿದ್ದರು. ಈ ಸಂದರ್ಭದಲ್ಲಿ ಯಾರಿಗೂ ತೊಂದರೆಯಾಗದಂತೆ ಪೊಲೀಸರು ಪರಿಸ್ಥಿತಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು.ಪೊಲೀಸರ ಕರ್ತವ್ಯ ನಿಷ್ಠೆಯಿಂದ ಕುಟುಂಬಸ್ಥರು ಯಾವುದೇ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗದೇ ಮನೆ ಮಗನ ಅಂತ್ಯ ಸಂಸ್ಕಾರ ನಡೆಸಿದ್ದರು. ಹೀಗಾಗಿ ಪುನೀತ್ ಪತ್ನಿ ಅಶ್ವಿನಿ