ನಟ ರಾಜು ತಾಳಿಕೋಟೆ ಮೇಲೆ ಹಲ್ಲೆ ಆರೋಪ

ಬೆಂಗಳೂರು| Krishnaveni K| Last Modified ಮಂಗಳವಾರ, 14 ಸೆಪ್ಟಂಬರ್ 2021 (17:18 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ರಾಜು ತಾಳಿಕೋಟೆ ಮೇಲೆ ಹಲ್ಲೆ ಆರೋಪವೊಂದು ಕೇಳಿಬಂದಿದೆ. ಸೋದರಳಿಯನ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆಂದು ಅಪವಾದ ಕೇಳಿಬಂದಿದೆ.

 
ಕೌಟುಂಬಿಕ ಕಲಹದ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಕ್ಕನ ಮಗ ಫಯಾಜ್ ಕರಜಗಿ ಪರವಾಗಿ ನಿಂತು ಹೆಣ್ಣು ಮಗಳ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
 
ಇವರ ಕೌಟುಂಬಿಕ ಕಲಹ ಬೀದಿ ರಂಪವಾಗಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು, ಘಟನೆಯಲ್ಲಿ ಗಾಯಗೊಂಡ ಸೋದರಳಿಯ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹಲ್ಲೆಗೊಳಗಾದ ಮಹಿಳೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :