ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಿನಿಮಾ ಬಹಳ ದಿನಗಳ ನಂತರ ತೆರೆ ಕಾಣುತ್ತಿದೆ. ಬಹುನಿರೀಕ್ಷಿತ ಅವನೇ ಶ್ರೀಮನ್ನಾರಾಯಣ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಎಂದು ಚಿತ್ರತಂಡ ಘೋಷಿಸಿದೆ.ಕೆಜಿಎಫ್, ಪೈಲ್ವಾನ್ ನಂತರ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಕನ್ನಡ ಸಿನಿಮಾ ಇದಾಗಿದ್ದು, ಈ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆಯಿದೆ. ಕಿರಿಕ್ ಪಾರ್ಟಿ ಬಳಿಕ ರಕ್ಷಿತ್ ಶೆಟ್ಟಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗುತ್ತಿರುವುದು ಇದೇ ಮೊದಲು.ನಾಡಹಬ್ಬ ದಸರಾ ಸಂದರ್ಭದಲ್ಲಿ ಚಿತ್ರತಂಡ ಪ್ರಚಾರ ಕೆಲಸಕ್ಕೆ ಚಾಲನೆ ನೀಡಿದ್ದು,