ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದ್ದು, ಇಂದು ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ.ನವಂಬರ್ 1 ರಂದು ಅಂದರೆ ರಾಜ್ಯೋತ್ಸವದಂದು ಆಯುಷ್ಮಾನ್ ಭವ ಸಿನಿಮಾ ಬಿಡುಗಡೆಯಾಗುತ್ತಿದೆ. ದ್ವಾರಕೀಶ್ ನಿರ್ಮಾಣ ಸಂಸ್ಥೆಯ ಚಿತ್ರ ಇದಾಗಿದ್ದು ಪಿ ವಾಸು ನಿರ್ದೇಶನದಲ್ಲಿ ಮೂಡಿಬಂದಿದೆ. ಈಗಾಗಲೇ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ.ಒಂದು ರೀತಿಯಲ್ಲಿ ಹಾರರ್ ಹಿನ್ನಲೆಯ ಕತೆ ಇದಾಗಿದೆ. ಶಿವಣ್ಣ ಜತೆಗೆ ನಾಯಕಿಯಾಗಿ ರಚಿತಾ ರಾಮ್ ನಟಿಸಿದ್ದಾರೆ. ಅವರಲ್ಲದೆ