ಯುಗ ಕ್ರಿಯೇಷನ್ಸ್ ಹಾಗೂ ಸುಮನ್ನಗರ್ಕರ್ ಪೊಡ್ರಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ, ಸುಮನ್ ನಗರ್ಕರ್ ಮುಖ್ಯ ಪಾತ್ರದಲ್ಲಿಯೂ ನಟಿಸಿರುವ ಚಿತ್ರ ಬಬ್ರೂ. ಈಗಾಗಲೇ ಅಗಾಧ ಪ್ರಮಾಣದಲ್ಲಿ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಇದೇ ಡಿಸೆಂಬರ್ 6ರಂದು ತೆರೆಗಾಣಲಿದೆ. ಸುಜಯ್ ರಾಮಯ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಈಗಾಗಲೇ ಸಖತ್ ಕ್ರೇಜ್ ಹುಟ್ಟು ಹಾಕಿವೆ. ಉಪೇಂದ್ರ ಬಿಡುಗಡೆ ಮಾಡಿರೋ ಹಾಡು ಮತ್ತು ರಾಕಿಂಗ್ ಸ್ಟಾರ್ ಯಶ್ ಲಾಂಚ್ ಮಾಡಿರೋ