ಶಂಕರ್ ನಾಗ್ ಅವರು ಕನ್ನಡ ನಾಡು ಕಂಡ ಶ್ರೇಷ್ಠ ನಟ, ನಿರ್ಮಾಪಕ ಹಾಗೂ ನಿರ್ದೇಶಕ. 36ನೇ ವಯಸ್ಸಿಗೆ ನಿಧನ ಹೊಂದಿದ ಶಂಕ್ರಣ್ಣ ಸಣ್ಣ ವಯಸ್ಸಿನಲ್ಲೇ ಸಾಕಷ್ಟು ಸಿನಿಮಾಗಳನ್ನು ನೀಡಿದ ಖ್ಯಾತಿ ಪಡೆದುಕೊಂಡರು. ಅವರು ಬದುಕಿದ್ದರೆ ಇಂದು 67ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು. ಆಗಿನ ಕಾಲದಲ್ಲೇ ಸಾಕಷ್ಟು ಪ್ರಯೋಗಾತ್ಮಕ ಸಿನಿಮಾಗಳನ್ನು ನೀಡಿದ ಖ್ಯಾತಿ ಶಂಕರ್ ನಾಗ್ಗೆ ಸಲ್ಲುತ್ತದೆ. ಅವರ ನಿರ್ದೇಶನದ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದವು. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭವಾಗಿ