ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭೆ ಚುನಾವಣಾ ಕಣದಿಂದ ಸ್ಪರ್ಧಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ.ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ನಿಂದ ಸ್ಪರ್ಧಿಸುತ್ತಿದ್ದರೆ, ಅವರ ವಿರುದ್ಧ ಇದೀಗ ಸುಮಲತಾ ಸ್ಪರ್ಧಿಸುತ್ತಿರುವುದರಿಂದ ಮಂಡ್ಯ ಕಣದ ಬಗ್ಗೆ ಎಲ್ಲರೂ ಕುತೂಹಲದಿಂದ ನೋಡುವಂತಾಗಿದೆ. ಇದೊಂದು ರೀತಿಯಲ್ಲಿ ಸ್ಯಾಂಡಲ್ ವುಡ್ ತಾರೆಯರ ಕದನವಾಗಿ ಮಾರ್ಪಟ್ಟಿದೆ.ಈ ಹಿನ್ನಲೆಯಲ್ಲಿ ಅಂಬರೀಶ್ ಕುಚಿಕು ಸ್ನೇಹಿತ ಸಾಹಸಸಿಂಹ