ಬಾಲಿವುಡ್ ಹಾಗೂ ಹಾಲಿವುಡ್ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಗೆ ಬಿಗ್ ಶಾಕ್ ನೀಡಲಾಗಿದೆ. ಆಸ್ಕರ್ ಪ್ರಶಸ್ತಿ ವಿಜೇತರಾಗಿರುವ ಎ.ಆರ್.ರೆಹಮಾನ್ ಗೆ ಆದಾಯ ತೆರಿಗೆ ವಂಚನೆ ಕೇಸ್ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿಮಾಡಿದೆ. ಮದ್ರಾಸ್ ಹೈಕೋರ್ಟ್ ನಲ್ಲಿ ಐಟಿ ಇಲಾಖೆಯು ಈ ಕುರಿತು ಅರ್ಜಿ ಸಲ್ಲಿಕೆ ಮಾಡಿತ್ತು. ಈಗ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಗೆ ಹೈಕೋರ್ಟ್ ನೋಟಿಸ್ ಜಾರಿಮಾಡಿದ್ದು, ಸಂಗೀತ ಸಂಯೋಜಕನಿಗೆ ಹೊಸ ಸಂಕಷ್ಟ ಎದುರಾಗಿದೆ.