ಚೆನ್ನೈ : ಟೆಸ್ಟ್ ಪಂದ್ಯದಲ್ಲಿ ಪ್ರಪ್ರಥಮ ಬಾರಿಗೆ 800 ವಿಕೆಟ್ ಪಡೆದು ಸಾಧನೆ ಮಾಡಿದ ಶ್ರೀಲಂಕಾ ಕ್ರಿಕೆಟ್ ತಂಡದ ಸ್ಪಿನ್ ಬೌಲರ್ ಮುತ್ತಯ್ಯ ಮುರಳೀಧರನ್ ಅವರ ಜೀವನಕಥೆಯನ್ನು ಸಿನಿಮಾ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಇದೀಗ ಅಧಿಕೃತ ಘೋಷಣೆಯಾಗಿದ್ದು, ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಮುರಳೀಧರನ್ ಅವರ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸುತ್ತಿದ್ದಾರೆ. ಎಂಎಸ್ ಶ್ರೀಪತಿ ನಿರ್ದೇಶಿಸುತ್ತಿದ್ದು, ಮೂವಿ ಟ್ರೈನ್ ಮೋಷನ್ ಪಿಕ್ಚರ್ಸ್ ಮತ್ತು