ಚೆನ್ನೈ: ತಮಿಳು ನಟ, ತಲಾ ಅಜಿತ್ ಕುಮಾರ್ ಮನೆಗೆ ದುಷ್ಕರ್ಮಿಯೊಬ್ಬ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ ಘಟನೆ ನಿನ್ನೆ ನಡೆದಿದೆ.ಅಜಿತ್ ಅವರ ಇಂಜಂಬಾಕ್ಕಮ್ ನಿವಾಸದಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ್ದ ವ್ಯಕ್ತಿ ತಕ್ಷಣವೇ ಕರೆ ಕಟ್ ಮಾಡಿದ್ದ. ಇದರಿಂದ ಗಾಬರಿಗೊಂಡ ಅಜಿತ್ ಕುಟುಂಬ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.ತಕ್ಷಣವೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಆಗಮಿಸಿದ ಪೊಲೀಸರ ತಂಡ ಎಲ್ಲೆಡೆ ಪರಿಶೀಲನೆ ನಡೆಸಿದೆ. ಆದರೆ ಅಂತಹ ಯಾವುದೇ ವಸ್ತುಗಳು