ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರು ದಾಖಲು

ಬೆಂಗಳೂರು| Krishnaveni K| Last Modified ಮಂಗಳವಾರ, 8 ಜೂನ್ 2021 (10:09 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ದೂರು ಸಲ್ಲಿಸಿದ್ದಾರೆ.

 
ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಚೇತನ್ ಬ್ರಾಹ್ಮಣರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ವಿಡಿಯೋವೊಂದನ್ನು ಪ್ರಕಟಿಸಿದ್ದರು. ಈ ವಿಡಿಯೋದಲ್ಲಿ ಚೇತನ್ ಬ್ರಾಹ್ಮಣರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ ಎಂಬುದು ಆರೋಪ.
 
ನಮ್ಮ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಚೇತನ್, ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಮಾತನಾಡಿದ್ದಾರೆ. ಸರ್ವೇ ಜನಃ ಸುಖಿನೋಭವಂತು ಎಂಬ ಮನೋಭಾವನೆ ಹೊಂದಿರುವ ಬ್ರಾಹ್ಮಣ ಸಮುದಾಯದ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :