ಬೆಂಗಳೂರು: ರಾಜಕೀಯದಲ್ಲೇ ಬ್ಯುಸಿಯಾಗಿರುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪ ಈಗ ಸಿನಿಮಾವೊಂದರಲ್ಲಿ ನಟಿಸಿ ಸುದ್ದಿಯಾಗಿದ್ದಾರೆ.ನೈಜ ಘಟನೆಯಾಧಾರಿತ ‘ತನುಜಾ’ ಎನ್ನುವ ಟೈಟಲ್ ನ ಸಿನಿಮಾವೊಂದು ಕನ್ನಡದಲ್ಲಿ ನಿರ್ಮಾಣವಾಗುತ್ತಿದೆ. ಈ ಸಿನಿಮಾದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪಾತ್ರ ಮಾಡಿದ್ದಾರೆ.ಈ ಹಿಂದೆ ಲಾಕ್ ಡೌನ್ ಸಮಯದಲ್ಲಿ ಪರೀಕ್ಷೆ ಬರೆಯಲು ನೂರಾರು ಕಿ.ಮೀ. ಪ್ರಯಾಣ ಮಾಡಿ ಗಮನ ಸೆಳೆದಿದ್ದ ಹುಡುಗಿಯ ಕತೆ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ. ಆ ಸಂದರ್ಭದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು. ಹೀಗಾಗಿ ಅವರನ್ನೇ ಈಗ ಸಿಎಂ ಪಾತ್ರದಲ್ಲಿ