ಬೆಂಗಳೂರು: ಡ್ರಗ್ ಮಾಫಿಯಾಗೆ ನಂಟಿದೆ ಎಂಬ ಅನುಮಾನದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಕಾಲಾಕಾಶ ಕೋರಿದ್ದ ನಟಿ ರಾಗಿಣಿ ದ್ವಿವೇದಿ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಹಲವು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೂ ನೋಟಿಸ್ ನೀಡಲಾಗಿತ್ತು. ಆದರೆ ವೈಯಕ್ತಿಕ ಕಾರಣ ನೀಡಿ ವಕೀಲರ ಮೂಲಕ ರಾಗಿಣಿ ಕಾಲಾವಕಾಶ ಕೋರಿದ್ದು,