ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾಗೆ ಸಂಬಂಧಪಟ್ಟಂತೆ ಬೆಳ್ಳಂ ಬೆಳಿಗ್ಗೆ ನಟಿ ರಾಗಿಣಿ ದ್ವಿವೇದಿ ನಿವಾಸಕ್ಕೆ ದಾಳಿ ಮಾಡಿದ್ದ ಸಿಸಿಬಿ ಅಧಿಕಾರಿಗಳು ಈಗ ಅವರನ್ನು ವಿಚಾರಣೆಗಾಗಿ ಕಚೇರಿಗೆ ಕರೆದೊಯ್ದಿದ್ದಾರೆ.ಸಿಸಿಬಿ ನಿನ್ನೆ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ನೋಟಿಸ್ ನೀಡಲಾಗಿತ್ತು. ಆದರೆ ಆಗ ಆಕೆ ಸೋಮವಾರ ಹಾಜರಾಗುವುದಾಗಿ ಕಾಲಾವಕಾಶ ನೀಡಿದ್ದರು. ಆದರೆ ಆಕೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆಯಿರುವುದರಿಂದ ರಾಗಿಣಿ ನಿವಾಸಕ್ಕೆ ಇಂದು ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಅದರಂತೆ ಹಲವು ದಾಖಲೆಗಳು,