Widgets Magazine

ನಟಸಾರ್ವಭೌಮನ ಮೆಚ್ಚಿದ ಸೆನ್ಸಾರ್ ಮಂಡಳಿ: ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು| Krishnaveni K| Last Modified ಶನಿವಾರ, 19 ಜನವರಿ 2019 (10:34 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಭಿನಯದ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ನಟ ಸಾರ್ವಭೌಮ ಸಿನಿಮಾಗೆ ಸೆನ್ಸಾರ್ ಮಂಡಳಿ ಹಸಿರು ನಿಶಾನೆ ತೋರಿದೆ.
 
ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯಾವುದೇ ದೃಶ್ಯಗಳಿಗೆ ಕತ್ತರಿ ಹಾಕಿಲ್ಲ, ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಚಿತ್ರತಂಡ ಹೇಳಿಕೊಂಡಿದೆ. ಜತೆಗೆ ಯು/ಎ ಸರ್ಟಿಫಿಕೇಟ್ ಕೂಡಾ ಕೊಟ್ಟಿದೆ.
 
ಈ ಖುಷಿಯಲ್ಲಿರುವ ಚಿತ್ರತಂಡ ಫೆಬ್ರವರಿ 7 ರಂದು ಸಿನಿಮಾ ರಿಲೀಸ್ ಮಾಡಲು ನಿರ್ಧರಿಸಿದೆ. ಜನವರಿ 25 ರಂದು ಟ್ರೈಲರ್ ಬಿಡುಗಡೆಯಾಗಲಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಈ ಸಿನಿಮಾದಲ್ಲಿ ಪುನೀತ್ ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದಾರೆ. ಹೀಗಾಗಿ ಪುನೀತ್ ಅಭಿಮಾನಿಗಳು ಈ ಸಿನಿಮಾಗಾಗಿ ಕಾಯುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ




ಇದರಲ್ಲಿ ಇನ್ನಷ್ಟು ಓದಿ :