ಬೆಂಗಳೂರು: ಬೆಳ್ಳಂ ಬೆಳಿಗ್ಗೆಯೇ ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್ ಎಂದು ಟ್ವೀಟ್ ಮಾಡಿ ತಲೆಗೆ ಹುಳ ಬಿಟ್ಟಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಓಪನ್ ಚಾಲೆಂಜ್ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ.ಮಧ್ಯಾಹ್ನ 1 ಗಂಟೆಗೆ ಫೇಸ್ ಬುಕ್ ಲೈವ್ ಬರುವುದಾಗಿ ಹೇಳಿದ್ದ ದರ್ಶನ್ ಅದರಂತೆ ಸಮಯಕ್ಕೆ ಸರಿಯಾಗಿ ಲೈವ್ ಬಂದಿದ್ದು, ಕುರುಕ್ಷೇತ್ರ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.ದರ್ಶನ್ ಬೆಳಿಗ್ಗೆ ಇಂತಹದ್ದೊಂದು ಟ್ವೀಟ್ ಮಾಡಿರುವುದು ನೋಡಿ ಎಲ್ಲರೂ ಏನೇನೋ ಅಂದುಕೊಂಡಿದ್ದರು.