ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ರನ್ನು ಅಪ್ಪಾಜಿ ಎಂದೇ ಕರೆಯುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಅಂಬರೀಶ್ ಮೇಲಿನ ಪ್ರೀತಿಯ ಋಣಸಂದಾಯ ಮಾಡಲು ಹೊರಟಿದ್ದಾರೆ.ಅಂಬರೀಶ್ ಪುತ್ರ ಅಭಿಷೇಕ್ ಅಭಿನಯಿಸುತ್ತಿರುವ ಅಮರ್ ಚಿತ್ರದ ಚಿತ್ರೀಕರಣ ಸಾಗುತ್ತಿದ್ದು, ಈ ಚಿತ್ರಕ್ಕೆ ಇದೀಗ ದರ್ಶನ್ ಸಾಥ್ ನೀಡಿದ್ದಾರೆ. ಅಭಿಷೇಕ್ ಚೊಚ್ಚಲ ಸಿನಿಮಾದಲ್ಲಿ ದರ್ಶನ್ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು ಪಕ್ಕಾ ಆಗಿದೆ.ಈಗಾಗಲೇ ಅಮರ್ ಚಿತ್ರಕ್ಕೆ ಸ್ಟಾರ್ ನಟರು ಸಾಥ್ ನೀಡಲಿದ್ದಾರೆ ಎಂಬ ಸುದ್ದಿಯಿತ್ತು. ಈಗ ದರ್ಶನ್