ಬೆಂಗಳೂರು: ಕಿರುತೆರೆಯ ಸೂಪರ್ ಹಿಟ್ ಜೋಡಿ ಚಂದನ್ ಕುಮಾರ್-ಕವಿತಾ ಗೌಡ ನಿಜ ಜೀವನದಲ್ಲೂ ಜೋಡಿಯಾಗುತ್ತಿದ್ದಾರೆ. ನಿನ್ನೆ ಇಬ್ಬರೂ ಪರಸ್ಪರ ಉಂಗುರ ಬದಲಾಯಿಸಿಕೊಂಡು ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಪಂಚತಾರಾ ಹೋಟೆಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕೇವಲ ಕುಟುಂಬಸ್ಥರು, ಆಪ್ತರು ಮಾತ್ರ ಭಾಗವಹಿಸಿದ್ದರು. ಸಾಂಪ್ರದಾಯಿಕ ಕಾರ್ಯಕ್ರಮಗಳ ಬಳಿಕ ನವ ಜೋಡಿ ಕೇಕ್ ಕಟ್ ಮಾಡಿ ರಿಂಗ್ ಬದಲಾಯಿಸಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದೆ.ಲಕ್ಷ್ಮೀ ಬಾರಮ್ಮಾ ಧಾರವಾಹಿಯಲ್ಲಿ ಜೊತೆಯಾಗಿ ನಟಿಸಿದ್ದ ಚಂದನ್-ಕವಿತಾ ಸ್ನೇಹಿತರಾಗಿದ್ದರು. ಬಳಿಕ ಇಬ್ಬರ